ಜಲಿಯನ್ ವಾಲಾಬಾಗ್ ಸ್ಮರಣೆ

*✴️ಜಲಿಯನ್ ವಾಲಾಬಾಗ್ ಸ್ಮರಣೆ️✴️*

*✴️Jallialwalabagh Massacre✴️*

ಏಪ್ರಿಲ್ 13, ಅಮೃತಸರದ ಜಲಿಯನ್ ವಾಲಾ ಬಾಗಿನಲ್ಲಿ ನಮಗಾಗಿ ಅಸಂಖ್ಯಾತ ಸ್ತ್ರೀ ಪುರುಷ ಮಕ್ಕಳು ಜೀವತೆತ್ತ ದಿನ.  ಅವರಿಗಾಗಿ ಮನಮಿಡಿಯುವ ಕ್ಷಣವಿದು.

*ಏಪ್ರಿಲ್ 13, 1919ರಲ್ಲಿ* ಈ ಚಿತ್ರದಲ್ಲಿ ತೋರಿರುವ ಕಿರು ಏಕ  ಪ್ರವೇಶದಲ್ಲಿ ಒಳಗೆ ಬಂದು ಸಭೆ ಸೇರಿದ್ದವರು  *10,000ಕ್ಕೂ* ಹೆಚ್ಚು ಮಂದಿ ಪುರುಷರು, ಮಹಿಳೆಯರು ಮತ್ತು ಮಕ್ಕಳು.   ಅವರಿಗೆ ಹೊರಹೋಗಲಿಕ್ಕೆ ಸಹಾ  ಯಾವುದೇ ಆಸ್ಪದವಿಲ್ಲದ ಹಾಗೆ, *ಬ್ರಿಗೇಡಿಯರ್ ಜನರಲ್ ರೆಗಿನಾಲ್ಡ್ ಇ. ಡೈಯರ್*ಎಂಬ ಅಯೋಗ್ಯ ಅಧಿಕಾರಿಯ ನೇತೃತ್ವದಲ್ಲಿ ಬ್ರಿಟಿಷ್ ಪಡೆಗಳು *15 ನಿಮಿಷಗಳ* ಕಾಲ ಗುಂಡಿನ ಮಳೆಗರೆದವು.  ಈ ಗುಂಡಿನ ಸುರಿಮಳೆಯಲ್ಲಿ *ಕನಿಷ್ಠ 379 ಜನ ಮೃತರಾಗಿ 1200ಕ್ಕೂ* ಹೆಚ್ಚು ಮಂದಿ ಗಾಯಗೊಂಡರು.  ಅನೇಕರು ಈ ಭಾವಿಗೆ ಹಾರಿದ ಘಟನೆ ಕೂಡಾ ನಡೆಯಿತು.  ಈ ಹತ್ಯಾಕಾಂಡ ಭಾರತೀಯರ ಸ್ವಾತಂತ್ರ್ಯ ಹೋರಾಟದ ಕೆಚ್ಚನ್ನು ಇನ್ನಷ್ಟು ಹೆಚ್ಚಿಸಿತು.

ಇಂದು ನಮಗಾಗಿ ಜೀವತೇಯ್ದ ಹುತಾತ್ಮರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುವುದರ ಜೊತೆಗೆ, ನಮಗಾಗಿ ತಮ್ಮ ಜೀವವನ್ನೂ ಬಲಿಕೊಟ್ಟು ಅಂದಿನ ಸಮಾಜ ನಮಗೆ ಕೊಡುಗೆಯಾಗಿ  ಕೊಟ್ಟ ಈ ಸ್ವಾತಂತ್ರ್ಯಕ್ಕೆ ನಿಷ್ಠಾವಂತವಾಗಿರಬೇಕಾಗಿದೆ.

*🇮🇳ಸಮಾವೇಶ:*

೧೯೧೯, ಏಪ್ರಿಲ್ ೧೩ರಂದು,ಬ್ರಿಟಿಷರು ಜಾರಿಗೆ ತಂದ ರೌಲಟ್ ಆಕ್ಟನ್ನು ವಿರೊಧಿಸಿ ಪಂಜಾಬ್ ರಾಜ್ಯದ ಮುಖ್ಯವಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಅಮೃತಸರದಲ್ಲಿನ ಹೃದಯಭಾಗದಲ್ಲಿರುವ ಜಲಿಯ‍ನ್ವಾಲ ಬಾಗ್ ಉದ್ಯಾನದಲ್ಲಿ ಸಹಸ್ರಾರು ಮಂದಿ ಭಾರತೀಯರು, ಮುಖ್ಯವಾಗಿ ಪಂಜಾಬಿ ನಾಗರೀಕರು, ಸಮಾವೇಶಗೊಂಡಿದ್ದರು. ಅದು ಸಿಖ್ಖರ ಪವಿತ್ರ ದಿನಗಳಲ್ಲೊಂದಾದ ಬೈಸಾಖಿ ದಿನ.ಆ ಪವಿತ್ರದಿನದಂದು ಬೈಸಾಖಿ ಹಬ್ಬವನ್ನು ಆಚರಿಸಲು ಅಮೃತಸರದಲ್ಲಿ ಸಮಾವೇಶಗೊಳ್ಳುವುದು ಸಂಪ್ರದಾಯವಾಗಿ ರೂಪುಗೊಂಡಿತ್ತು. ಸಂವಹನ ತಂತ್ರಜ್ಞಾನವು ತೀರಾ ಹಿಂದುಳಿದಿದ್ದ ಪಂಜಾಬಿನಲ್ಲಿ, ಗ್ರಾಮೀಣ ಪ್ರದೇಶದಿಂದ ಅಮೃತಸರಕ್ಕೆ ಬರುತ್ತಿದ್ದ ಜನರಿಗೆ ಮಾಹಿತಿಯು, ಸಮಾಚಾರಗಳು ಲಭ್ಯವಾಗಿರಲಿಲ್ಲ. ಶಾಸನಬದ್ಧವಾಗಿ ಅಮೃತಸರದಲ್ಲಿ ಐದಕ್ಕಿಂತ ಹೆಚ್ಚಿನ ಜನ ಗುಂಪುಗೂಡುವಂತಿರಲಿಲ್ಲ (ಇದನ್ನು, 'ಮಾರ್ಷಲ್ ನಿಯಮ' ಎನ್ನುತ್ತಿದ್ದರು). ಆದ್ದರಿಂದ ಅಂದು ನಡೆದ ಸಮಾವೇಶ, ನಿಯಮದ ಉಲ್ಲಂಘನೆಯಾಗಿತ್ತು ಎನ್ನಲಾಗುತ್ತದೆ.

*🇮🇳ಹತ್ಯಾಕಾಂಡ:*

ತೊಂಬತ್ತು (೯೦) ಸೈನಿಕರಿದ್ದ ಬಂದೂಕುಗಳಿಂದ ಶಸ್ತ್ರಸಜ್ಜಿತವಾದ ತುಕಡಿಯೊಂದು ಉದ್ಯಾನವನಕ್ಕೆ ಎರಡು ಶಸ್ತ್ರಸಜ್ಜಿತ ಕಾರುಗಳೊಂದಿಗೆ ಬಂದಿತು. ಮೆಷಿನ್ಗನ್ ‍ಗಳನ್ನು ಅಳವಡಿಸಲಾಗದ್ದ ಆ ವಾಹನಗಳು, ಉದ್ಯಾನದ ಕಡಿದಾದ ಬಾಗಿಲಿನಿಂದ ಬರಲು ಅಸಾಧ್ಯವಾಗಿತ್ತು. ಆ ತುಕಡಿಯ ನಿಯಂತ್ರಕರಾದ ಬ್ರಿಗೇಡಿಯರ್ ಜನರಲ್ ರೆಗಿನಾಲ್ಡ್ ಡೈಯರ್ ಅವರು, ಉದ್ಯಾನದೊಳಗೆ ಕಾಲಿಡುತ್ತಲೇ, ಅಲ್ಲಿ ನೆರೆದಿದ್ದವರಿಗೆ ಯಾವೊಂದು ಎಚ್ಚರಿಕೆಯನ್ನೂ ಕೊಡದೆ, ಗುಂಪು ಚದುರುವಂತೆ ಯಾವೊಂದು ಆದೇಶವನ್ನೀಯದೇ, ಹಠಾತ್ತಾಗಿ ಗುಂಡಿನ ಮಳೆಗರೆವಂತೆ ತಮ್ಮ ತುಕಡಿಗೆ ಆದೇಶವನ್ನಿತ್ತರು. ಅದರಲ್ಲಿಯೂ ವಿಶೇಷವಾಗಿ, ಜನಸಾಂದ್ರತೆ ಎಲ್ಲಿ ಹೆಚ್ಚಾಗಿರುವುದೋ ಅತ್ತಕಡೆ ಗುಂಡಿನ ದಾಳಿ ಕೇಂದ್ರೀಕೃತವಾಗುವಂತೆ ಆದೇಶಿಸಿದರು.ಗುಂಡಿನ ದಾಳಿಯು ಸಂಜೆ ೧೭:೧೫ಕ್ಕೆ ಪ್ರಾರಂಭವಾದದ್ದು ಸುಮಾರು ಹತ್ತರಿಂದ ಹದಿನೈದು ನಿಮಿಷಗಳ ಕಾಲ, ಸತತವಾಗಿ ನಡೆಯಿತು. ಸುತ್ತಲೂ ಇಟ್ಟಿಗೆ ಗೋಡೆಗಳಿಂದ, ಕಟ್ಟಡಗಳಿಂದ ಆವೃತವಾಗಿದ್ದ ಉದ್ಯಾನವನಕ್ಕೆ ಇದ್ದದ್ದು ಐದು ಕಡಿದಾದ ದ್ವಾರಗಳು ಮಾತ್ರ. ಅದರಲ್ಲಿ ಬಹುತೇಕ ಶಾಶ್ವತವಾಗಿ ಮುಚ್ಚಲ್ಪಟ್ಟವಂಥವು. ತುಕಡಿಯಿದ್ದ ದ್ವಾರದ ಹೊರತಾಗಿ ಇನ್ನೊಂದೇ ದ್ವಾರವು ಮಾರ್ಗವಾಗಿ ಉಳಿದಿದ್ದರಿಂದ, ಕಂಗಾಲಾದ ಜನರು ಗೋಡೆಯನ್ನು ಹತ್ತಿ ಹಾರಲು ಪ್ರಯತ್ನಿಸಿದರು.ಬಹಳಷ್ಟು ಜನರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಉದ್ಯಾನದಲ್ಲಿದ್ದ ಬಾವಿಯೊಳಗೆ ಹಾರಿದರು. ಈ ಹತ್ಯಾಕಾಂಡ ಸ್ಮಾರಕದಲ್ಲಿನ ಅಂಶವೊಂದರ ಪ್ರಕಾರ, ಬಾವಿಯೊಂದರಿಂದಲೇ ಸುಮಾರು ೧೨೦ ಶವಗಳನ್ನು ಹೊರತೆಗೆಯಲಾಗಿತ್ತು. ಹತ್ಯಾಕಾಂಡದಿಂದ ನೂರಾರು ಜನರು ಸಾವನಪ್ಪಿದರಲ್ಲದೆ, ಸಾವಿರಾರು ಮಂದಿ ಗಾಯಗೊಂಡರು. ಸರ್ಕಾರಿ ಮೂಲಗಳ ಪ್ರಕಾರ ೩೭೯ ಮಂದಿ ಸಾವನಪ್ಪಿದರಾದರೂ, ಆದರೆ ಸಾವಗೀಡಾದವರ ನಿಜವಾದ ಸಂಖ್ಯೆ ಇನ್ನು ಹೆಚ್ಚಿತ್ತು ಎನ್ನಲಾಗುತ್ತದೆ.ಕರ್ಫ್ಯು ವಿಧಿಸಿದ ಕಾರಣ, ಗಾಯಗೊಂಡ ಹಲವರನ್ನು ಹತ್ಯಾಕಾಂಡದ ಸ್ಥಳದಿಂದ ಇತರೆಡೆಗೆ ಸ್ಥಳಾಂತರಿಸಲಾಗಲಿಲ್ಲ. ನಿಜವಾದ ಸಾವಿನ ಸಂಖ್ಯೆಗಳ ಬಗ್ಗೆ ಇಂದಿಗೂ ಚರ್ಚೆ ನಡೆಯುತ್ತಲೇ ಇದೆ. ಈ ಘಟನೆ ನಡೆದ ಬಳಿಕ, ಬ್ರಿಟಿಷ್ ಸೇನೆಗೆ, ವಿದ್ರೋಹಿ ಸೈನ್ಯವು ಎದುರಾದುದರಿಂದ, ಅವರಿಗೆ ತಕ್ಕ ಪಾಠ ಕಲಿಸಿದ್ದಾಗಿ, ಜನರಲ್ ಡೈಯರನು ತನ್ನ ಮೇಲಧಿಕಾರಿಗಳಿಗೆ ವರದಿಯೊಪ್ಪಿಸಿದನು.ಇದಕ್ಕೆ ಉತ್ತರಿಸಿದ ಪಂಜಾಬ್‌ನ ಅಂದಿನ ಲೆಫ್ಟಿನೆಂಟ್-ಗವರ್ನರ್ಆದ ಮೈಕಲ್ ಓ'ಡ್ವಾಯರ್,ಅವರಿಗೆ ತಕ್ಕ ಪಾಠ ಕಲಿಸಿದಿರಿ, ಲೆಫ್ಟಿನೆಂಟ್-ಗವರ್ನರ ಇದನ್ನು ಅನುಮೋದಿಸುತ್ತಾರೆ ಎಂದು ತಂತಿಯ ಮೂಲಕ ಜನರಲ್ ಡೈಯರ್‌ಗೆ ಸಂದೇಶ ಕಳುಹಿಸಿದರು. ಮೈಕಲ್ ಓ'ಡ್ವಾಯರ್ನ ಇಚ್ಚೆಯಂತೆ ಈ ಘಟನೆಯ ನಂತರ, ಅಂದಿನ ವೈಸರಾಯ್ಯಾಗಿದ್ದ, ಫ್ರೆಡ್ರಿಕ್ ತೆಸಿಂಗರ್, ಅಮೃತಸರ ಹಾಗು ಅದರ ಸುತ್ತ-ಮುತ್ತ ಮಿಲಿಟರಿ ಆಡಳಿತವನ್ನು ಹೇರುವಂತೆ ಆದೇಶಿಸಿದನು.ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡದ ಕುರಿತು ತನಿಖೆ ನಡೆಸಲು ಹಂಟರ್ ಆಯೋಗ ಅನ್ನು ಸ್ಥಾಪಿಸುವಂತೆ ಅಂದಿನ ಭಾರತದ ರಾಜ್ಯಾಂಗ ಕಾರ್ಯದರ್ಶಿಯಾಗಿದ್ದ ಎಡ್ವಿನ್ ಮೊಂಟಾಗೊ ನಿರ್ಧರಿಸಿದನು. ಈ ಆಯೋಗದೆದುರು ಮೈಕಲ್ ಓ'ಡ್ವಾಯರ್ನನ್ನು ಕರೆತರಲಾಯಿತು. ವಿಚಾರಣೆಯ ವೇಳೆ, ಜಲಿಯನ್‌ವಾಲ ಬಾಗ್ ನಲ್ಲಿ ಉದ್ದೆಶಿಸಲಾಗಿದ್ದ ಕಾರ್ಯಕ್ರಮದ ಬಗ್ಗೆ ತನಗೆ ಅಂದಿನ ದಿನ ೧೨.೪೦ರ ವೇಳೆಗೆ ತಿಳಿಯಿತಾದರೂ, ಇದನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲವೆಂದು, ಡ್ವಾಯರ್ ಒಪ್ಪಿಕೊಂಡನು.ಇದಲ್ಲದೆ, ತಾನು ಜಲಿಯನ್‌ವಾಲ ಬಾಗ್ ‌ಗೆ ಗುಂಡು ಹಾರಿಸುವ ಉದ್ದೇಶದಿಂದಲೆ ತೆರಳಿದ್ದಾಗಿ ತಿಳಿಸಿದನು. "ಜಲಿಯನ್‌ವಾಲಾ ಬಾಗನಲ್ಲಿ ಸೇರಿದ ಜನರನ್ನು ಚದುರಿಸಲು, ಗುಂಡಿನ ಅವಶ್ಯಕತೆ ಇರಲ್ಲಿಲವಾದರೂ, ತಾನು ಆ ಕ್ರಮ ಕೈಗೊಂಡಿರದಿದ್ದರೆ, ಜನರು ಮತ್ತೆ ಗುಂಪು ಸೇರಿ ತನ್ನನ್ನು ನೋಡಿ

Post a Comment

0 Comments